ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ

ಹಾಸನ ಜಿಲ್ಲೆ ಹೊಳೆನರಸೀಪುರದ ಹರದನಹಳ್ಳಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ದಂಪತಿ ಸಮೇತರಾಗಿ ಹುಟ್ಟೂರಿನಲ್ಲಿ ಮನೆ ದೇವರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಕಾರ್ತಿಕ ಮಾಸದ ಕಡೇ ಸೋಮವಾರ ಹಿನ್ನೆಲೆಯಲ್ಲಿ ಪೂಜೆ, ಹೋಮ ಹವನದಲ್ಲಿ ಭಾಗಿಯಾಗಿದ್ದಾರೆ. ಪುತ್ರ ರೇವಣ್ಣ ಹಾಗು ಪತ್ನಿ ಚೆನ್ನಮ್ಮ ಜೊತೆ ಹೆಚ್​ಡಿ ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ.