ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಲ್ಲಿ ಪ್ರತಿಭಟನೆ

ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಅಡ್ಯಾರ್ ಕಣ್ಣೂರು‌ ಷಾ ಮೈದಾನದ ಸುತ್ತಮುತ್ತ ಮತ್ತು ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಅದರೆ, ನಿರೀಕ್ಷೆಗೆ ಮೀರಿದ ಜನ ಧರಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಕಷ್ಟ ಪಡಬೇಕಾಯಿತು. ಪ್ರತಿಭಟನೆಯ ಕಾರಣ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ಅನ್ನು ಬಂದ್ ಮಾಡಲಾಗಿದೆ.