ಜಿಲ್ಲಾಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಹಿನ್ನೆಲೆ ಇಂದು ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ಮಾಡಿದ್ದಾರೆ. ಫಲಾನುಭವಿಗಳ ಸಮರ್ಪಕ ನೋಂದಣಿಗೆ ಸೂಕ್ತ ಸಿದ್ಧತೆ, ನೋಂದಣಿ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅನುವು ಮಾಡಿಕೊಡಬಾರದೆಂದು ಸೂಚನೆ ನೀಡಿದ್ದಾರೆ.