ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಇಂದು ಭಾರತೀಯ ರೈಲ್ವೆ ಇಲಾಖೆಗೆ ಮಹತ್ವದ ದಿನ. ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವಂದೇ ಭಾರತ್ ಸ್ಲೀಪರ್ ರೈಲು ಹೌರಾ ಮತ್ತು ಗುವಾಹಟಿ (ಕಾಮಾಕ್ಯ) ನಡುವೆ ಸಂಚರಿಸಲಿದೆ.