ತಮ್ಮ ಭಾಷಣಗಳಲ್ಲಿ ಹಿಂದಿ ಮತ್ತು ಭಾರತೀಯ ಪ್ರಾದೇಶಿಕ ಭಾಷೆಗಳನ್ನು ಸಾಮಾನ್ಯವಾಗಿ ಬಳಸುವ ಪ್ರಧಾನಿ ನರೇಂದ್ರ ಮೋದಿ, ಪಹಲ್ಗಾಮ್ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ ಎಂದು ಬಿಹಾರದಲ್ಲಿ ನಡೆದ ರ್ಯಾಲಿಯಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡಿದ್ದಾರೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಸಂಕಲ್ಪದ ಬಗ್ಗೆ ಜಗತ್ತು ತಿಳಿಯಬೇಕೆಂದು ಅವರು ಇಂಗ್ಲಿಷ್ ಬಳಸಿದ್ದಾರೆ.