ಪೊಲೀಸರು ದೈಹಿಕ ಸದೃಢತೆ ಕಾಯ್ದುಕೊಳ್ಳುವಿಕೆ ಬಗ್ಗೆ ಆಯುಕ್ತ ಬಿ.ದಯಾನಂದ್ ಹೇಳಿದ್ದಿಷ್ಟು

ಉತ್ತಮವಲ್ಲದ ಜೀವನ ಶೈಲಿ ದೈಹಿಕ ಸದೃಢತೆ ಇಲ್ಲದಿರಲು ಕಾರಣ. ಸಮಾಲೋಚಕರೊಂದಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಪೊಲೀಸರು ದೈಹಿಕ ಸದೃಢತೆ ಕಾಯ್ದುಕೊಳ್ಳುವ ವಿಚಾರವಾಗಿ ಮಾತನಾಡಿದ ಅವರು, ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಹಲವು ಕಾರ್ಯಸೂಚಿ ರೂಪಿಸಲಾಗುತ್ತಿದೆ ಎಂದರು.