ಯುವಕರ ಕಾರ್ಯಕ್ಕೆ ಶ್ಲಾಘನೆ: ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ಕಿಮ್ಸ್​

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಲಾರಿಗೆ ಡಿಕ್ಕಿ ಹೊಡೆದು ನಾಲ್ವರು ಸಿಲುಕಿಕೊಂಡಿದ್ದರು. ಈ ವೇಳೆ, ಮೊಹಮದ್ ಸಮಿ, ಅತಿಕ್ ಮತ್ತು ಕಪೀಲ್ ಎಂಬ ಮೂವರು ಯುವಕರು ತಮ್ಮ ಧೈರ್ಯದಿಂದ ನಾಲ್ವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕರ ಮಾನವೀಯತೆಗೆ ಗಾಯಾಳುಗಳ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.