ದೀಪಾವಳಿ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಜೋರಾಗಿದೆ. ಆದರೆ, ಹೂವು, ಹಣ್ಣು ಮತ್ತು ತರಕಾರಿಗಳ ಬೆಲೆ ಏರಿಕೆ ಆಗಿದ್ದು, ಗ್ರಾಹಕರು ಶಾಕ್ ಆಗಿದ್ದಾರೆ. ಈ ಬೆಲೆ ಏರಿಕೆಯಿಂದಾಗಿ ಈ ವರ್ಷದ ದೀಪಾವಳಿ ದುಬಾರಿಯಾಗಲಿದೆ ಎಂದು ಗ್ರಾಹಕರು ಅಭಿಪ್ರಾಯಪಟ್ಟಿದ್ದಾರೆ.