‘ಶಿವಾಜಿ ಸುರತ್ಕಲ್ 2’ ಸಿನಿಮಾ ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎರಡನೇ ವಾರಕ್ಕೆ ಕಾಲಿಟ್ಟಿದೆ. ಈ ಬಗ್ಗೆ ರಮೇಶ್ ಅರವಿಂದ್ ಅವರಿಗೆ ಖುಷಿ ಇದೆ. ಅವರು ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ. ಈ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಸಿನಿಮಾ ಸಕ್ಸಸ್ ಆದ ಬಗ್ಗೆ ಮಾತನಾಡಿರುವ ಸಂಗೀತಾ ಶೃಂಗೇರಿ, ‘70-80 ವಯಸ್ಸಿನ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದರು. ಅವರು ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದರು’ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ.