ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಬಸ್ ಟಿಕೆಟ್ ದರ ಏರಿಕೆ ನಿರ್ಧರಕ್ಕೆ ಸದ್ಯ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಎಲ್ಲೆಡೆ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಬಿಜೆಪಿ ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.