ನಟ ಅನಂತ್ ನಾಗ್ ಅವರು ಚಿತ್ರರಂಗದಲ್ಲಿ 50 ವರ್ಷ ಕಳೆದಿದ್ದಾರೆ. ಇಂದು (ಸೆಪ್ಟೆಂಬರ್ 4) ಅವರಿಗೆ ಜನ್ಮದಿನದ ಸಂಭ್ರಮ. ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು.