ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!

ಕರ್ನಾಟಕ ರಾಜಕೀಯದಲ್ಲಿ, ಅದರಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸಂಘರ್ಷ, ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಪ್ರಯಾಣ ಬೆಳೆಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮ ನಿಮಿತ್ತ ಉಭಯ ನಾಯಕರು ಪ್ರಯಾಣಿಸಿದ್ದರೂ ಹಲವು ಅನುಮಾನಗಳಿಗೆ ಇದು ಕಾರಣವಾಗಿದೆ.