ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಹಗರಣದಲ್ಲಿ ಸಿಎಂ ಹಾಗು ಅವರ ಪತ್ನಿಯ ಪಾತ್ರ ಇಲ್ಲ ಎಂದು ಬರೆದಿದೆ ಎಂದು ಹೇಳಲಾಗುತ್ತಿದೆ. ಈ ವರದಿ ಬಗ್ಗೆ ಸಿಎಂ ಅವರ ಪ್ರತಿಕ್ರಿಯೆ ಕೇಳಲಾಗಿದ್ದು, ಅವರು ತನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ. ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರವಾದ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಲೋಕಾಯುಕ್ತ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ.