ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಬೆನ್ನು ನೋವು ಹೆಚ್ಚಾಗಿದೆ. ಅವರ ಮುಖಭಾವದಲ್ಲೇ ನೋವಿನ ತೀವ್ರತೆ ಗೊತ್ತಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಇರುವ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡ ಬಂದು ಹೆಚ್ಚಿನ ತಪಾಸಣೆ ಮಾಡಿಸಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ದರ್ಶನ್ ಅವರ ತಪಾಸಣೆ ಮಾಡಿದ್ದಾರೆ. ಬಳಿಕ ದರ್ಶನ್ ಅವರನ್ನು ವಾಪಸ್ ಬಳ್ಳಾರಿ ಜೈಲಿಗೆ ಕರೆದುಕೊಂಡು ಬರಲಾಗಿದೆ.