ಸಿಎಂ ಸಿದ್ದರಾಮಯ್ಯ ಭೇಟಿಯಾದ ದಿಗ್ವಿಜಯ್ ಸಿಂಗ್ ದಂಪತಿ

ಸಿದ್ದರಾಮಯ್ಯ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ತಮ್ಮ ಪತ್ನಿ ಅಮೃತಾ ರೈ ಅವರ ಸಮೇತ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಭೇಟಿಯಾದರು.