ಕಳೆದ 15 ದಿನಗಳಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪ್ಯಾರಲ್ ರಸ್ತೆ ಜಲಾವೃತಗೊಂಡು ಬಂದ್ ಆಗಿದೆ.