ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಬೃಹತ್ ಲಾರಿಯೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಬೆಂಗಳೂರಿನ ಹೊರ ವರ್ತುಲ ರಸ್ತೆಯ ನಾಗವಾರ-ಹೆಬ್ಬಾಳ ಮಾರ್ಗ ಮಧ್ಯೆ ಕೆಂಪಾಪುರದ ಬಳಿ ಶುಕ್ರವಾರ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಸದ್ಯ ಲಾರಿಯನ್ನು ತೆರೆವುಗೊಳಿಸಲಾಗಿದೆ. ಅದೃಷ್ಟವಶಾತ್, ಅಪಘಾತದಿಂದಾಗಿ ಪ್ರಾಣಹಾನಿ ಸಂಭವಿಸಿಲ್ಲ.