ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ, ಐವರು ಸಾವು

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮಾರುಕಟ್ಟೆಯಲ್ಲಿ ಸಂಭವಿಸಿದ ಐಇಡಿ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಖುಜ್ದಾರ್‌ನ ನಾಲ್ ಬಜಾರ್‌ನಲ್ಲಿ ನಿಲ್ಲಿಸಿದ್ದ ಮೋಟಾರ್‌ಬೈಕ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರಿಸಲಾಗಿತ್ತು. ಸ್ಫೋಟದಲ್ಲಿ ಹಲವಾರು ವಾಹನಗಳು ನಾಶವಾಗಿವೆ