ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ

ಕಳೆದ ವಾರ ನಟಿ ಹಂಸಾ ಅವರು ‘ಬಿಗ್ ಬಾಸ್ ಕನ್ನಡ 11’ ಶೋನಿಂದ ಎಲಿಮಿನೇಟ್ ಆದರು. ಬಣ್ಣದ ಲೋಕದಲ್ಲಿ ಹಲವು ವರ್ಷಗಳಿಂದ ಅವರು ಸಕ್ರಿಯರಾಗಿದ್ದಾರೆ. ಈಗ ಬಿಗ್ ಬಾಸ್ ಮೂಲಕವೂ ಗುರುತಿಸಿಕೊಂಡಿದ್ದಾರೆ. ಅವರಿಗೆ ಸಿಕ್ಕಿರುವ ಪೇಮೆಂಟ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಆ ಬಗ್ಗೆ ಕೇಳಿದ ನೇರ ಪ್ರಶ್ನೆಗೆ ಹಂಸಾ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ.