ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಆರ್ಎಸ್ ಸಂಸ್ಥಾಪಕ ಡಾ. ಹೆಗ್ಡೆವಾರ್ಗೆ ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರ ನಾಗ್ಪುರ ಭೇಟಿಯಿಂದಾಗಿ ಇಡೀ ವಿದರ್ಭದಲ್ಲಿ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಹೇಳಿದರು.