ಚಿಕ್ಕಮಗಳೂರು: ಭೀಕರ ಅಪಘಾತ, ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಸ್ಕೂಟಿ ಸವಾರ

ವ್ಯಕ್ತಿಯೊಬ್ಬರು ಹೋಂಡಾ ಆ್ಯಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾಗಿ ಸ್ಕೂಟಿ ತೀವ್ರವಾಗಿ ಜಖಂಗೊಂಡ ಘಟನೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಸ್ಕೂಟಿ ಸವಾರ ಕೂದಲೆಳೆ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.