ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ತವಗ ಗ್ರಾಮದ ರೈತ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಲ್ಲಿ ಎತ್ತು ಖರೀದಿಸಿದ್ದಾರೆ. ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬೇಸಾಯವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಗೆ ಅನುಕೂಲವಾಗಿದೆ.