ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದಲ್ಲಿ ಯಶಸ್ ಸೂರ್ಯ ಹಾಗೂ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರ ನವೆಂಬರ್ 10ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಮೋಷನ್ ಭರ್ಜರಿಯಾಗಿ ನಡೆಯುತ್ತಿದೆ. ಯಶಸ್ ಸೂರ್ಯ ಹಾಗೂ ಸೋನಲ್ ಆಟೋ ಮೇಲೆ ಸುತ್ತಾಡಿ ಚಿತ್ರಕ್ಕೆ ಪ್ರಚಾರ ನೀಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.