ಬೆಂಗಳೂರಿನ ಜಿಗಣಿಯಲ್ಲಿ ರಾಂಚಿ ಮೂಲದ ರಾಜು ಮುಂಡಾ ಎಂಬ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ವರ್ತಿಸಿ ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಕಟ್ಟಡ ಏರಿದ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ವ್ಯಕ್ತಿಯನ್ನು ಮನವೊಲಿಸಿ ಕೆಳಗಿಳಿಸಿ ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.