ಧರೆಗುರುಳಿದ ಮರ, ವಿದ್ಯುತ್ ಕಂಬ

ಮೈಸೂರಿನಲ್ಲಿ ಬುಧವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಚಾಮುಂಡಿಪುರಂ ಬಡಾವಣೆಯಲ್ಲಿ 4 ವಿದ್ಯುತ್ ಕಂಬಗಳು ಕೂಡ ಧರಾಶಾಯಿಯಾಗಿವೆ. ಚಾಮುಂಡಿಬೆಟ್ಟದ ಮೆಟ್ಟಿಲು ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಮುರಿದುಬಿದ್ದಿದೆ.