ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ವಿಚಾರವಾಗಿ ಇಂದು ಮೈಸೂರು ಲೋಕಾಯುಕ್ತ ಕಚೇರಿ ಭೇಟಿ ನೀಡಿದ ದೂರುದಾರ ಸ್ನೇಹಮಯಿ ಕೃಷ್ಣ ದಾಖಲೆಗಳನ್ನು ಕೊಟ್ಟಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.