ಉತ್ತರ ಕರ್ನಾಟಕ ಭಾಗದ ಜೀವನದಿ ಕೃಷ್ಣೆಗೆ ಸಿಎಂ ಸಿದ್ದರಾಮಯ್ಯ ಇಂದು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಹಾಗೂ ಆಧಿಕಾರಿಗಳು ಸಿಎಂಗೆ ಸಾಥ್ ನೀಡಲಿದ್ದಾರೆ. ಸಿಎಂ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಸುತ್ತಮುತ್ತ ಬಣ್ಣ ಬಣ್ಣದ ಲೈಟಿಂಗ್ಸ್ನಿಂದ ಸಿಂಗರಿಸಲಾಗಿದೆ.