ಇಟಲಿಯ ಅಪುಲಿಯಾ ಪ್ರದೇಶದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಕ್ರೇನಿಯಾ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಮಾತುಕತೆ ನಡೆಸಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ವಿವಿಧ ಅಂಶಗಳ ಕುರಿತು ಝೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.