ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿಗಳ ಶೋ ರೂಂನಲ್ಲಿ ಇಂದು (ಮಾರ್ಚ್ 22) ಭಾರಿ ಬೆಂಕಿ ಅವಘಡ ಸಂಭವಿಸಿದೆ. ಕನಿಷ್ಠ 11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ನಡೆಯುತ್ತಿರುವ ಅಗ್ನಿಶಾಮಕ ಕಾರ್ಯಾಚರಣೆಯಿಂದಾಗಿ ಪ್ರಯಾಣಿಕರು ಈ ಪ್ರದೇಶದಲ್ಲಿ ಸಂಚಾರ ದಟ್ಟಣೆಯನ್ನು ಅನುಭವಿಸಿದ್ದಾರೆ.