ಹೇಮಂತ್ ಎಂ. ರಾವ್ ಅವರು ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಇಂದು (ಸೆಪ್ಟೆಂಬರ್ 1) ಬಿಡುಗಡೆ ಆಗಿದೆ. ಗುರುವಾರ (ಆಗಸ್ಟ್ 31) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ಈ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಅನೇಕರು ಬಂದು ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಜೋಡಿಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ ಕೂಡ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ‘ರಕ್ಷಿತ್ ಮತ್ತು ರುಕ್ಮಿಣಿ ಅವರ ಕೆಮಿಸ್ಟ್ರಿ ತುಂಬ ಚೆನ್ನಾಗಿದೆ. ನಿರ್ದೇಶಕ ಹೇಮಂತ್ ಅವರು ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಬಗ್ಗೆ ಹೆಮ್ಮೆ ಆಗುತ್ತದೆ’ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ. ‘ಹೇಮಂತ್ ರಾವ್ ಅವರಿಗೆ ಈ ಸಿನಿಮಾದ ಕ್ರಿಡಿಟ್ ಸಲ್ಲಬೇಕು. ನನಗೆ ಈ ಚಿತ್ರ ತುಂಬ ಇಷ್ಟ ಆಯ್ತು’ ಎಂದು ಮಿಲನಾ ನಾಗರಾಜ್ ಹೇಳಿದ್ದಾರೆ.