ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್

ಬೆಂಗಳೂರಿನ ಯಲಹಂಕದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವಂತಹ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಾಮಾಜಿಕ ಕಾರ್ಯಕರ್ತರಿಂದ ಹಕ್ಕು ಮತ್ತು ಶಿಕ್ಷಣ ಇಲಾಖೆಗೆ ದೂರು ನೀಡಿದ್ದು, ಮುಖ್ಯ ಶಿಕ್ಷಕಿ ಮತ್ತು ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.