ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.