ಸರ್ಕಾರಿ ಬಸ್ಸಿನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್!

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರಹಾಕಿದಾಗ ಅವರ ತಲೆ ಕಿಟಕಿಗೆ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ. ಬಸ್​ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್​ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ.