ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ದೀಪಾಲಂಕಾರ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಹಲವು ಕಟ್ಟಡಗಳನ್ನು ವಿಶೇಷ ವಿದ್ಯುತ್​​ ದೀಪಗಳಿಂದ ಅಲಂಕರಿಸಲಾಗುತ್ತದೆ. ಅದೇ ರೀತಿಯಾಗಿ ಸದ್ಯ  ವಿಧಾನಸೌಧಕ್ಕೆ ದೀಪಾಲಂಕಾರ ಮಾಡಿದ್ದು, ಕೇಸರಿ, ಬಿಳಿ, ಹಸಿರು ಬಣ್ಣದ ವಿಶೇಷ ವಿದ್ಯುತ್​ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.