ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳು ಒಟ್ಟು ನಾಲ್ಕು ಆಸ್ಪತ್ರೆಗಳನ್ನು ಸೀಜ್ ಮಾಡಿದ್ದಾರೆ.