ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೇಸಿಗೆಯಿಂದ ಒಣಗಿರುವ ಕಾಡಿನಲ್ಲಿ ಬೆಂಕಿ ವೇಗವಾಗಿ ಹರಡುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ. ಈ ಘಟನೆಯಿಂದ ಪರಿಸರಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿದೆ.