ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ಹಿಂದೂ ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮಹೇಶ್ ಎಂಬುವರ ಮನೆಯ ಕಿಟಕಿ ಗಾಜು ಹಾನಿಗೊಳಗಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.