ಭರತ್ ಪತ್ನಿ ಸುಜಾತಾ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ

ಭರತ್ ಭೂಷಣ್ ಅಂತಿಮ ಸಂಸ್ಕಾರದಲ್ಲಿ ಸರ್ಕಾರದ ಪರವಾಗಿ ರಾಮಲಿಂಗಾರೆಡ್ಡಿ ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರವು ಭಯೋತ್ಪಾದಕರ ದಾಳಿಯಲ್ಲಿ ಮಡಿದ ಕನ್ನಡಿಗರ ಕುಟುಂಬಗಳಿಗೆ ತಲಾ ₹10 ಲಕ್ಷ ನೀಡುವ ಘೋಷಣೆ ಮಾಡಿದೆ. ಭರತ್ ಭೂಷಣ್ ಮತ್ತು ಶಿವಮೊಗ್ಗ ಮಂಜುನಾಥ್ ರಾವ್ ಅವರ ಪಾರ್ಥೀವ ಶರೀರಗಳು ಇಂದು ಬೆಳಗ್ಗೆ 6ಗಂಟೆಗೆ ದೆಹಲಿಯಿಂದ ಬೆಂಗಳೂರುಗೆ ಆಗಮಿಸಿದವು.