ಗುಜರಾತ್ ವಿರುದ್ಧ ಅಬ್ಬರದ ಅರ್ಧಶತಕ ಸಿಡಿಸಿದ ಲಿವಿಂಗ್‌ಸ್ಟೋನ್

ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಜಿತೇಶ್ ಶರ್ಮಾ ಜವಾಬ್ದಾರಿ ವಹಿಸಿಕೊಂಡು ಗುಜರಾತ್ ಬೌಲರ್‌ಗಳನ್ನು ಸದೆಬಡಿದರು. ಇವರಿಬ್ಬರ ನಡುವೆ ಐದನೇ ವಿಕೆಟ್‌ಗೆ 52 ರನ್‌ಗಳ ಜೊತೆಯಾಟ ಇತ್ತು. ಲಿವಿಂಗ್‌ಸ್ಟೋನ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ 54 ರನ್‌ಗಳ ಇನ್ನಿಂಗ್ಸ್‌ನಲ್ಲಿ ಲಿವಿಂಗ್‌ಸ್ಟೋನ್ 1 ಬೌಂಡರಿ ಮತ್ತು 5 ಅಮೋಘ ಸಿಕ್ಸರ್‌ಗಳನ್ನು ಬಾರಿಸಿದರು.