ಆದಾಯ ಸರ್ಟಿಫಿಕೇಟ್ ​​ಮಾಡಿಸುವುದಕ್ಕೆ ಪಟ್ಟ ಫಜೀತಿ ವಿವರಿಸಿದ ಸಿಎಂ ಸಿದ್ರಾಮಯ್ಯ

ದೇವರಾಜ ಅರಸು ಜಯಂತ್ಯೋತ್ಸವ ಅಂಗವಾಗಿ ನಿನ್ನೆ ಗುರುವಾರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಟೌನ್‌ ಹಾಲ್‌ ನ ಪುರಭವನದಲ್ಲಿ ನಡೆದ ಕಾರ್ಯಕ್ರಮ ಅದು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ದೇವರಾಜ್ ಅರಸು ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಮುಖ್ಯಮಂತ್ರಿ ಪುಷ್ಪಾರ್ಚನೆ ಮಾಡಿದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.