ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ

ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್​ ಆಗಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳಿಂದ ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ ಕೇಳಿಬಂದಿದೆ.