ಮಣಿಪಾಲದಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರೊಂದು ಉಡುಪಿಯ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಉಡುಪಿ ಕಡಿಯಾಳಿ ಒಕುಡೆ ಟವರ್ಸ್ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಕಾರು ಚಲಾಯಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ದಿಢೀರ್ ಬ್ರೇಕ್ ಹಾಕಿದ್ದರಿಂದ ಸ್ವಿಫ್ಟ್ ಕಾರು ಪಲ್ಟಿ ಹೊಡೆದಿದೆ. ಈ ವೇಳೆ ರಸ್ತೆ ಬದಿ ತಮ್ಮ ಬೈಕ್ನಲ್ಲಿ ನಿಂತಿದ್ದ ವೃದ್ದರಿಗೆ ಮತ್ತು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ.