ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣ (Bengaluru Metro) ಬಳಿ ಅಗ್ನಿ ಅವಘಡ ಸಂಭವಿಸಿದೆ (Fire Accident). ರಾಜಾಜಿನಗರ ಮೆಟ್ರೋ ನಿಲ್ದಾಣ (Rajajinagar Metro Station) ಬಳಿ ನಿಂತಿದ್ದ 4 ಬೈಕ್ಗಳಿಗೆ ಬೆಂಕಿ ತಗುಲಿದ್ದು ಬೈಕ್ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.