ರಸ್ತೆಯಲ್ಲೇ ಮಹಿಳಾ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ

ಉತ್ತರಪ್ರದೇಶದ ಮೊರಾದಾಬಾದ್‌ನ ರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲೇ ಲೇಡಿ ಕಾನ್‌ಸ್ಟೆಬಲ್ ಅನ್ನು ನಿಲ್ಲಿಸಿ, ಬೈಕ್ ಸವಾರನೊಬ್ಬ ಕಪಾಳಮೋಕ್ಷ ಮಾಡಿ ಒದ್ದಿದ್ದಾನೆ. ಬಳಿಕ ಬಲವಂತವಾಗಿ ಆಕೆಗೆ ಚುಂಬಿಸಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.