ಕಲಂಗಡಿ ತಿಂದು ಹಾಳು ಮಾಡುತ್ತಿದ್ದ ಕರಡಿಯನ್ನು ನಾಯಿಯೊಂದು ಅಟ್ಟಾಡಿಸಿ ಓಡಿಸಿದ ಘಟನೆ ಕೊಪ್ಪಳ ತಾಲೂಕಿನ ಗಂಗನಾಳ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಹಲವೆಡೆ ಕರಡಿ ದಾಳಿಗಳು ನಡೆದಿದ್ದು, ತಾಲೂಕಿನಲ್ಲಿ ಕರಡಿ ಹಾವಳಿ ಹೆಚ್ಚುತ್ತಿದೆ. ಹೀಗಾಗಿ ಕರಡಿಗಳ ಹಾವಳಿಗೆ ಬ್ರೇಕ್ ಹಾಕುವಂತೆ ರೈತರು ಒತ್ತಾಯಿಸಿದ್ದಾರೆ.