ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಹಿರಿಯ ನಟಿ ಎಂ. ಲೀಲಾವತಿ ಅವರು ಇಂದು (ಏ 29) ಅಂಚೆ ಮತದಾನ ಮಾಡಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಬೆಂಗಳೂರಿನ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅವರು ತಮ್ಮ ವೋಟ್ ಹೊಂದಿದ್ದಾರೆ.