ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಪರೀಕ್ಷೆಯ ಚರ್ಚೆಗೆ ಈ ಬಾರಿ ಹೊಸ ಆಯಾಮ ದೊರೆತಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿದೆ.