ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ

ವಾಷಿಂಗ್ಟನ್ ಡಿ.ಸಿ.ಯಲ್ಲಿರುವ ಕ್ಯಾಪಿಟಲ್ ಒನ್ ಅರೆನಾದಲ್ಲಿ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಪದಗ್ರಹಣ ಸಮಾರಂಭಕ್ಕೂ ಮುನ್ನ ಇಂದು ಬೆಳಗಿನ ಜಾವದಲ್ಲೇ ಸಾವಿರಾರು ಜನರು ಕೊರೆಯುವ ಚಳಿಯಲ್ಲಿ ನಿಂತು, ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸುವ ಅವಕಾಶಕ್ಕಾಗಿ ಸಾಲುಗಟ್ಟಿ ನಿಂತಿದ್ದರು. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಟ್ರಂಪ್ ಪದಗ್ರಹಣಕ್ಕೆ ಇನ್ನು 1 ಗಂಟೆ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ವೇದಿಕೆಯ ಸುತ್ತ ವಿವಿಧ ದೇಶಗಳ ಗಣ್ಯರು, ಅಮೆರಿಕದ ಗಣ್ಯರು, ರಾಜಕೀಯ ನಾಯಕರು ಆಸೀನರಾಗಿದ್ದಾರೆ. ಹಲವು ಕಡೆಗಳಲ್ಲಿ ಜನರಿಗೆ ಟ್ರಂಪ್ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸಲು ಬೃಹತ್ ಪರದೆಗಳನ್ನು ಹಾಕಲಾಗಿದೆ.