ಶ್ರಾವಣ ಮಾಸದ ಕೊನೆಯ ಶನಿವಾರ ಹಿನ್ನೆಲೆ ದೇವಾಲಯಗಳಲ್ಲಿ ಭಕ್ತರ ದಂಡು

ಕೊನೆಯ ಶ್ರಾವಣ ಶನಿವಾರ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬಂದಿದೆ. ಕೊನೆಯ ಶ್ರಾವಣವಿರುವುದರಿಂದ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ಶನಿಮಹಾತ್ಮ ಸ್ವಾಮಿಗೆ ತೈಲಾಭಿಷೇಕ ಪಂಚಾಮೃತ ಅಭಿಷೇಕ ನಡೆಸಿ ವಿಶೇಷ ಪೂಜೆ ಮಾಡಲಾಗಿದೆ.