ಮಂಗಳೂರಿನ ತುಳಸಿ ಪೈ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ 600ಕ್ಕೆ 597 ಅಂಕ ಪಡೆಯುವ ಮೂಲಕ ಫಸ್ಟ್​​ ರ್ಯಾಂಕ್​ ಬಂದಿದ್ದಾರೆ. ದ್ವಿತೀಯ ಸ್ಥಾನವನ್ನು ಮಂಗಳೂರಿನ ತುಳಸಿ ಪೈ ಅವರು ಅಲಂಕರಿಸಿದ್ದಾರೆ. 600ಕ್ಕೆ 596 ಅಂಕಗಳನ್ನು ಪಡೆದಿದ್ದಾರೆ.